ಉದಯವಾಹಿನಿ ಯಶವಂತಪುರ : ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಬರುವ ಕೆಂಗೇರಿ ಹೋಬಳಿ ಕಣ್ಮೆಣಿಕೆ ಕಾಲೋನಿ ಅಂಚೆಪಾಳ್ಯ ಕಂಬಿಪುರ ಗೇರುಪಾಳ್ಯ ಕಾರು ಬೆಲೆ ಈ ಎಲ್ಲಾ ಗ್ರಾಮಗಳು ಕುಂಬಳಗೋಡು ಗ್ರಾಮ ಪಂಚಾಯಿತಿಗೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಜನತೆಗೆ ಕುಡಿಯುವ ಶುದ್ಧ ನೀರಿನ ಬಗ್ಗೆ ಸುಮಾರು ವರ್ಷಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗಿತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಹಾಲಿ ಶಾಸಕರಾದ ಎಸ್ ಟಿ ಸೋಮಶೇಖರ್ ಗೌಡರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದಿಂದ ಯಶವಂತಪುರ ಕ್ಷೇತ್ರಕ್ಕೆ ಕುಡಿಯುವ ನೀರಿನ ಓವರ್ ಟ್ಯಾಂಕ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು ಈ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಅನುಕೂಲವಾಗುವಂತೆ ಜನಸಾಮಾನ್ಯರಿಗೆ ನೀರು ಅಮೃತ ಇದ್ದಂತೆ ಎಂದು ತಿಳಿಸಿದರು. ಹಾಗೂ ಕುಂಬಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಉಪಾಧ್ಯಕ್ಷರಾದ ಗೋಪಾಲಕೃಷ್ಣ ಎಂ. ಮಾಜಿ ಅಧ್ಯಕ್ಷರಾದ ಚಿಕ್ಕರಾಜು ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ಕೃಷ್ಣಪ್ಪ ಮಂಜುಳಮ್ಮ ಯಶೋದಮ್ಮ ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರುಗಳು ಮಹಿಳಾ ಸದಸ್ಯರುಗಳು ಈ ಕಾರ್ಯಕ್ರಮಕ್ಕೆ ಭಾಗಿಯಾಗಿ ಕಾರ್ಯಕರ್ತರು ಸಾರ್ವಜನಿಕರು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
