ಉದಯವಾಹಿನಿ, ನವದೆಹಲಿ: ರಾಜಸ್ತಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಪಕ್ಷ, ಸುಮಾರು ೨೦ ರಿಂದ ೨೫ ಶಾಸಕರಿಗೆ ಟಿಕೆಟ್ ನೀಡದಿರುವ ಸಾಧ್ಯತೆಗಳಿವೆ. ಮುಂದಿನ ತಿಂಗಳು ೨೫ ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಳೆ ೬೦ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಆಂತರಿಕ ಸಮೀಕ್ಷೆಗಳ ಆಧಾರದ ಮೇಲೆ ರಾಜಸ್ಥಾನದಲ್ಲಿ ಕಾಂಗ್ರೆಸ್ ೨೦-೨೫ ಹಾಲಿ ಶಾಸಕರಿಗೆ ಟಿಕೆಟ್ ನೀಡದಿರಲು ನಿರ್ದರಿಸಿದ್ದು ಎಲ್ಲವೂ ಪಕ್ಷದ ಹೈಕಮಾಂಡ್ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದು ಹೇಳಲಾಗಿದೆ. ರಾಜಸ್ಥಾನದ ಚುನಾವಣೆ ಸಂಬಂಧ ಕೇಂದ್ರ ಚುನಾವಣಾ ಸಮಿತಿಯ ಸುಮಾರು ೬೦ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನಿಗದಿತ ಕಾರ್ಯಕ್ರಮದ ನಂತರ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ಚುನಾವಣೆಯಲ್ಲಿ ಗೆಲ್ಲುವ ಮಾನದಂಡವನ್ನು ಮುಂದಿಟ್ಟುಕೊಂಡು ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಮುಂದಾಗಿದೆ. ಯಾರಿಗೆಲ್ಲ ಟಿಕೆಟ್ ನೀಡಲಿದೆ ಎನ್ನುವುದು ಸದ್ಯದಲ್ಲಿಯೇ ಗೊತ್ತಾಗಲಿದೆ ಎಂದು ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ಹೇಳಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಪಾರದರ್ಶಕ ಮತ್ತು ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೌಲ್ಯಮಾಪನ ಮಾಡಿದ ಸಮೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಜನರಿಗೆ ಶಾಸಕರು ಉತ್ತರದಾಯಿಗಳಾಗಿರುತ್ತಾರೆ” ಎಂದು ಹೇಳಿದ್ದಾರೆ.
