
ಉದಯವಾಹಿನಿ ದೇವದುರ್ಗ:- ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಬರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ನವರಾತ್ರಿಯ ದಿನವಾದ ಗುರುವಾರ ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಹೋತ್ಸವ ಅದ್ದೂರಿಯಾಗಿ ನಡೆಯಿತು.ನವರಾತ್ರಿ ಉತ್ಸವ ಪ್ರಯುಕ್ತ ಕಳೆದ ನಾಲ್ಕು ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯುತ್ತಿದ್ದು, ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.ಕಲ್ಯಾಣ ಮಹೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಅರ್ಚಕರಾದ ಶ್ರೀ ನಿವಾಸ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಮುಖ್ಯ ಅರ್ಚಕರಾದ ರಾಘವೇಂದ್ರಾಚಾರ್ಯ ಗುಡಿ, ವೆಂಕಟೇಶಾಚಾರ್ಯ ಗುಡಿ ಹಾಗೂ ಕುಟುಂಬದ ಸದಸ್ಯರು ಮತ್ತು ಸಾವಿರಾರು ಜನ ಭಕ್ತರು ಇದ್ದರು.
