ಉದಯವಾಹಿನಿ, ತಿರುವನಂತಪುರ: ವಿಮಾನದ ರನ್‌ವೇನಲ್ಲಿ ಶ್ರೀ ಪದ್ಮನಾಭಸ್ವಾಮಿ ದೇವರ ಮೆರವಣಿಗೆ ‘ಅರಟ್ಟು’ ಸಾಗುವ ಹಿನ್ನೆಲೆಯಲ್ಲಿ ಸೋಮವಾರ (ಅ.23) ಐದು ಗಂಟೆಗಳ ಕಾಲ ತಿರುವನಂತಪುರ ವಿಮಾನ ನಿಲ್ದಾಣದ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹೇಳಿದೆ.
ದೇವರ ಮೆರವಣಿಗೆ ಸಾಗುವ ಅವಧಿಯಲ್ಲಿ ವಿಮಾನ ಹಾರಾಟ ಸ್ಥಗಿತಗೊಳ್ಳುವ ಪದ್ಧತಿ ದಶಕಗಳ ಹಿಂದಿನಿಂದಲೂ ಜಾರಿಯಲ್ಲಿದೆ.
‘ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಿಂದ ‘ಅಲ್ಪಾಸ್ಸಿ ಅರಟ್ಟು’ ಮೆರವಣಿಗೆಗೆ ಅನುಕೂಲವಾಗುವಂತೆ ಸೋಮವಾರ ಸಂಜೆ 4 ಗಂಟೆಯಿಂದ ರಾತ್ರಿ 9 ರವರೆಗೆ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು’ ಎಂದು ತಿರುವನಂತಪುರ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರಕಟಣೆ ಹೊರಡಿಸಿದೆ. ನಾಲ್ಕು ವಿಮಾನಗಳ ಸೇವೆಗಳನ್ನು ಮರುಹೊಂದಿಸಲಾಗಿದೆ. ಮೆರವಣಿಗೆಯು ದೇವಸ್ಥಾನಕ್ಕೆ ಹಿಂದಿರುಗಿದ ನಂತರ, ರನ್ ವೇಯನ್ನು ಸ್ವಚ್ಛಗೊಳಿಸಲಾಗುತ್ತದೆ. ಬಳಿಕ ಪರಿಶೀಲಿನೆ ನಡೆಸಿ ವಿಮಾನ ಸೇವೆಗಳನ್ನು ಪುನರಾರಂಭಗೊಳಿಸಲಾಗುತ್ತದೆ ಎಂದು ಅದು ಹೇಳಿದೆ.
