ಉದಯವಾಹಿನಿ, ಜೆರುಸಲೇಂ: ಇಸ್ರೇಲ್ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ ಬಳಿ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೆಸ್ಟೀನ್ ಮಾಧ್ಯಮಗಳು ವರದಿ ಮಾಡಿವೆ.ಘಟನೆಯಲ್ಲಿ ಆಸ್ಪತ್ರೆಗಳ ಹಾನಿ ಮತ್ತು ಸಾವು -ನೋವುಗಳ ಬಗ್ಗೆ ತಕ್ಷಣಕ್ಕೆ ತಿಳಿದುಬಂದಿಲ್ಲ.
ಈ ಕುರಿತು ಇಸ್ರೇಲ್ ಸೇನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇಸ್ರೇಲ್, ಗಾಜಾ ನಗರದ ಶಿಫಾ ಮತ್ತು ಅಲ್-ಕುಡ್ಸ್ ಆಸ್ಪತ್ರೆಗಳ ಬಳಿ ಮತ್ತು ಎನ್‌ಕ್ಲೇವ್‌ನ ಉತ್ತರದಲ್ಲಿರುವ ಇಂಡೋನೇಷಿಯನ್ ಆಸ್ಪತ್ರೆಯ ಬಳಿ ದಾಳಿ ಮಾಡಿದೆ ವರದಿಯಾಗಿದೆ. ಅ.14ರಂದು ಅಲ್-ಕುಡ್ಸ್ ಆಸ್ಪತ್ರೆಯನ್ನು ಸ್ಥಳಾಂತರಿಸಲು ಇಸ್ರೇಲ್ ಆದೇಶಿಸಿತ್ತು ಎಂದು ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತಿಳಿಸಿದೆ. ಆದರೆ, ರೋಗಿಗಳು ಮತ್ತು ಗಾಯಾಳುಗಳನ್ನು ಕೂಡಲೇ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ ಎಂದು ಹೇಳಲಾಗಿದೆ.
