ಉದಯವಾಹಿನಿ, ಲಖನೌ: ನೋಂದಣಿ ಇಲ್ಲದೆ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಮುಜಾಫರ್ ನಗರದ ಮದರಸಾಗಳು ದಿನಕ್ಕೆ ೧೦,೦೦೦ ರೂಪಾಯಿ ದಂಡ ತೆರಬೇಕು ಎಂದು ಉತ್ತರ ಪ್ರದೇಶದ ಮೂಲ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.ಮೂಲ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಸೂಕ್ತ ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುತ್ತಿ ರುವ ೧೦ಕ್ಕೂ ಹೆಚ್ಚು ಮದರಸಾಗಳಿಗೆ ನೋಟಿಸ್ ಜಾರಿ ಮಾಡಿದ್ದು, ಸೂಕ್ತ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳ ಪ್ರಕಾರ ಉತ್ತರ ಪ್ರದೇಶದಲ್ಲಿ ಸುಮಾರು ೨೪,೦೦೦ ಮದರಸಾಗಳಿವೆ. ಅವುಗಳಲ್ಲಿ ೧೬,೦೦೦ ಮದರಸಾಗಳು ಮಾನ್ಯತೆ ಪಡೆದಿವೆ ಮತ್ತು ೮,೦೦೦ ಮದರಸಾಗಳು ಮಾನ್ಯತೆ ಪಡೆದಿಲ್ಲ.ಸೂಚನೆ ನೀಡಿದ ಮದರಸಾಗಳಿಗೆ ಆದೇಶ ಬಂದ ಮೂರು ದಿನಗಳೊಳಗೆ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ . ತಪ್ಪಿದಲ್ಲಿ ಕಾನೂನು ಅನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮದರಸಾಗಳು ಮಾನ್ಯತೆ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಲ್ಲಿ ದಿನಕ್ಕೆ ೧೦,೦೦೦ ರೂ. ದಂಡ ವಿಧಿಸಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಮುಜಾಫರ್‌ನಗರ ಮೂಲ ಶಿಕ್ಷ ಣಾಧಿಕಾರಿ ಶುಭಂ ಶುಕ್ಲಾ ಮಾತನಾಡಿ, ಇಲ್ಲಿ ನಡೆಯುತ್ತಿರುವ ನೂರಕ್ಕೂ ಹೆಚ್ಚು ಮದರಸಾಗಳು ಜಿಲ್ಲೆಯಲ್ಲಿ ನೋಂದಣಿಯಾಗಿಲ್ಲ ಅಥವಾ ಮಾನ್ಯತೆ ಪಡೆದಿಲ್ಲ ಮತ್ತು ಇವುಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ತನ್ನ ಕಚೇರಿಗೆ ತಿಳಿಸಿದೆ.
