ಉದಯವಾಹಿನಿ, ವಾಷಿಂಗ್ಟನ್:  ಅಮೆರಿಕಾದ ತಪ್ಪು ತಿಳುವಳಿಕೆಯನ್ನು ನಿವಾರಿಸಲು ನಾವು ಬಯಸಿದ್ದೇವೆ. ಪರಸ್ಪರ ಸಹಕಾರದ ಮೂಲಕ ಎರಡೂ ದೇಶಗಳು ಸಂಬಂಧಗಳನ್ನು ಸ್ಥಿರಗೊಳಿಸಲು ಉದ್ದೇಶಿಸಲಾಗಿದೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ತಿಳಿಸಿದ್ದಾರೆ.
ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಲಿರುವ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ (ಎಪಿಇಸಿ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾ ಅಧ್ಯಕ್ಷ ಕ್ಷೀ ಜಿನ್‌ಪಿಂಗ್‌ಗೆ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಆಹ್ವಾನ ನೀಡಿದ್ದು, ಇದರ ಭಾಗವಾಗಿ ವಾಂಗ್ ಯೀ ಅವರು ಅಮೆರಿಕಾ ಪ್ರವಾಸದಲ್ಲಿದ್ದು, ಅಲ್ಲಿನ ವಿದೇಶಾಂಗ ಕಾರ್ಯದರ್ಶಿ ಆಂಥನಿ ಬ್ಲಿಂಕೆನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆ ಮಾತನಾಡಿದ ವಾಂಗ್ ಯೀ, ನಾವು ಯುಎಸ್-ಚೀನಾ ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಆರೋಗ್ಯಕರ, ಸ್ಥಿರ ಮತ್ತು ಸುಸ್ಥಿರ ಅಭಿವೃದ್ಧಿಯ ಹಾದಿಗೆ ಮರಳಲು ಎರಡೂ ದೇಶಗಳಿಗೆ ಪ್ರಯೋಜನವಾಗುವ ಸಹಕಾರವನ್ನು ವಿಸ್ತರಿಸಲು ನಾವು ಪ್ರಯತ್ನಿಸುತ್ತೇವೆ.ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ನಮಗೆ ಅರಿವಿದೆ. ಹಾಗಾಗಿ ಚೀನಾ ಶಾಂತವಾಗಿ ಪ್ರತಿಕ್ರಿಯಿಸಲು ಆಶಿಸುತ್ತದೆ ಎಂದು ತಿಳಿಸಿದ್ದಾರೆ. ಮುಂದೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕ್ಷಿ ಜಿನ್‌ಪಿಂಗ್ ಹಾಗೂ ಬೈಡೆನ್ ನಡುವೆ ಮಹತ್ವದ ಸಭೆ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ವಿದೇಶಾಂಗ ಸಚಿವರ ನಡುವೆ ಸಭೆ ನಡೆದಿದೆ. ಶುಕ್ರವಾರ ಅಮೆರಿಕಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜ್ಯಾಕ್ ಸುಲಿವಾನ್ ಜೊತೆ ವಾಂಗ್ ಭೇಟಿ ಮಾಡಲಿದ್ದು, ಇಲ್ಲಿ ಕೂಡ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!