ಉದಯವಾಹಿನಿ, ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಬಗ್ಗೆ ಸಿಬಿಐ ಇಲ್ಲವೇ ಎನ್‌ಐಎ ತನಿಖೆ ಮಾಡಿಸಬೇಕು ಎಂದು ಮಾಜಿ ಸಚಿವ ಎಸ್. ಸುರೇಶ್‌ಕುಮಾರ್ ಒತ್ತಾಯಿಸಿದರು.
ಬಿಜೆಪಿ ಕಾರ್ಯಾಲಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್‌ಎಲ್ ಟೆಕ್ನೋ ಸಲ್ಯೂಷನ್ ಸಿದ್ದಪಡಿಸಿದ ನಕಲಿ ಆಧಾರ್ ಕಾರ್ಡ್‌ಗಳನ್ನು ರದ್ದುಪಡಿಸಬೇಕು. ಈ ನಕಲಿ ಕಾರ್ಡ್‌ಗಳ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಇದು ಕೇವಲ ರಾಜಕೀಯದ ಪ್ರಶ್ನೆಯಲ್ಲ. ಸಮಾಜದ ಅಳಿವು-ಉಳಿವಿನ ಪ್ರಶ್ನೆ. ಜನ್ಮ ದೃಢೀಕರಣ ಪತ್ರವನ್ನು ನೀಡದೆ ಆಧಾರ್ ಕಾರ್ಡ್ ಮಾಡಲಾಗಿದೆ. ಇದು ಸರಿಯಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ಕೊಡುತ್ತೇವೆ ಎಂದರು.
ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿರಲಿ, ಅವರಿಗೆ ಶಿಕ್ಷೆಯಾಗಬೇಕು.
