ಉದಯವಾಹಿನಿ, ನವದೆಹಲಿ: ದೇಶದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ​, ಸಿಆರ್​ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆ ಸೇರಿ ಕ್ರಿಮಿನಲ್​ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳ ಕರಡು ವರದಿಯನ್ನು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಇಂದು (ಶುಕ್ರವಾರ) ತಡೆಹಿಡಿದಿದೆ.
ಭಾರತೀಯ ದಂಡ ಸಂಹಿತೆ (ಐಪಿಸಿ)-1860, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್​ಪಿಸಿ)-1973, ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ- 1872 ಅನ್ನು ಬದಲಿಸಿ, ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ-2023 ಮಸೂದೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಆಗಸ್ಟ್ 11ರಂದು ಈ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಪರಿಚಯಿಸಿದ್ದರು.

Leave a Reply

Your email address will not be published. Required fields are marked *

error: Content is protected !!