ಉದಯವಾಹಿನಿ, ನವದೆಹಲಿ: ಭಾರತದ ದೂರಸಂಪರ್ಕ ಕ್ಷೇತ್ರದ ಪ್ರಮುಖ ಕಂಪನಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ದೇಶದ ಮೊದಲ ಉಪಗ್ರಹ ಆಧಾರಿತ ಗಿಗಾಬಿಟ್ ಬ್ರಾಡ್ಬ್ಯಾಂಡ್ ಸೇವೆ ಜಿಯೋಸ್ಪೇಸ್ ಫೈಬರ್ ಅನ್ನು ಅನಾವರಣಗೊಳಿಸಿದೆ.
ದೇಶದ ದೂರದ ಪ್ರದೇಶಗಳನ್ನು ಹೈಸ್ಪೀಡ್ ಇಂಟರ್ನೆಟ್ನೊಂದಿಗೆ ಸಂಪರ್ಕಿಸುವತ್ತ ಇದೊಂದು ದೊಡ್ಡ ಹೆಜ್ಜೆಯಾಗಿದೆ.
ರಿಲಯನ್ಸ್ ಜಿಯೋ ನೀಡಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ, ಈವರೆಗೂ ಇಂಟರ್ನೆಟ್ ಸೌಲಭ್ಯವನ್ನು ತಲುಪಿಸಲಾಗದ ದೂರದ ಪ್ರದೇಶಗಳಿಗೂ ಹೈಸ್ಪೀಡ್ ಬ್ರಾಡ್ಬ್ಯಾಂಡ್ ಸೇವೆಗಳನ್ನು ವಿಸ್ತರಿಸಲು ರಿಲಯನ್ಸ್ ಜಿಯೋ ಪ್ರಯತ್ನಿಸುತ್ತಿದೆ ಎಂದು ಹೇಳಿದೆ. ಶುಕ್ರವಾರ ನವದೆಹಲಿಯಲ್ಲಿ ಆರಂಭವಾದ ಇಂಡಿಯಾ ಮೊಬೈಲ್ ಕಾಂಗ್ರೆಸ್ ಸಮಾವೇಶದಲ್ಲಿ ಈ ತಂತ್ರಜ್ಞಾನವನ್ನು ಪ್ರದರ್ಶಿಸಲಾಯಿತು. ಜಿಯೋಸ್ಪೇಸ್ ಫೈಬರ್ ಶೀಘ್ರದಲ್ಲೇ ಭಾರತದಾದ್ಯಂತ ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಾಗಲಿದೆ.
