
ಉದಯವಾಹಿನಿ, ಮುದ್ದೇಬಿಹಾಳ ; ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಆ.27ರ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಾಯಿತು. ತಹಶಿಲ್ದಾರ ಅವರಿಗೆ ಮನವಿ ಪತ್ರವನ್ನು ನೀಡಿ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಗಂಗಾ ಹಡಪದ , ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ , ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಹಣ ಹೊಂದಿಸುತ್ತಿದ್ದು, ಸರ್ಕಾರ ತಮ್ಮ ಅಧಿಕಾರ ಉಳಿಸಿಕೊಳ್ಳುವಲ್ಲಿಯೇ ಹೆಚ್ಚು ಆಸಕ್ತಿ ವಹಿಸಿದ್ದು ಕಳೆದ ಒಂದು ವರ್ಷದಿಂದ ವಿದ್ಯಾರ್ಥಿ ವೇತನದಲ್ಲಿಯೆ ತಮ್ಮ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಸರ್ಕಾರ ಶಾಪವಾಗಿ ಪರಿಣಮಿಸಿದೆ. 2022-23ನೇ ಸಾಲಿನ ವಿದ್ಯಾರ್ಥಿವೇತನ ದಿಢೀರ್ ನಿಲ್ಲಿಸಿರುವುದರಿಂದ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ ಎಂದು ದೂರಿದರು. ತಾಲೂಕ ಸಂಚಾಲಕ ಶಿವನಗೌಡ ಬಿರಾದಾರ ವಿದ್ಯಾರ್ಥಿಗಳಿಗೆ ಮೂರು ವರ್ಷದಿಂದ ಲ್ಯಾಪ್‌ಟಾಪ್ ನೀಡಿಲ್ಲ. ಸರ್ಕಾರ ವಿದ್ಯಾರ್ಥಿಗಳ ಕಣ್ಣೊರೆಸುವ ತಂತ್ರ ಅನುಸರಿಸಬಾರದು. ವಿದ್ಯಾರ್ಥಿಗಳಿಗೂ ಗ್ಯಾರಂಟಿ ಕೊಡಿ ಎಂದು ಆಗ್ರಹಿಸಿದರು ಗ್ರೇಡ್2 ತಹಶಿಲ್ದಾರ ಜಿ ಎನ್ ಕಟ್ಟಿ ಅವರಿಗೆ ಮನವಿಯನ್ನು ಪತ್ರವನ್ನು ಎಬಿವಿಪಿ ವಿದ್ಯಾರ್ಥಿಗಳು ನೀಡಿದರು ಈ ವೇಳೆ ಓಂಕಾರ ಪವಾರ್, ರಮೇಶ ಹೂಗಾರ,ಪಲ್ಲವಿ ದೂಡಮನಿ, ಬಸವರಾಜ ಬಡಿಗೇರ, ಸೋಹೆಲ್ ಮಾಳೂರ, ಆರತಿ ಮಾದರ,ದೀಪಾ ಇಳಗೇರ,ಪವನ ಕುಮಾರ್ ಉಪಸ್ಥಿತರಿದ್ದರು.
