ಉದಯವಾಹಿನಿ, ನವದೆಹಲಿ: ಪಂಜಾಬ್ ನಲ್ಲಿ ಕಳೆದ ಎರಡು ವರ್ಷಗಳಲ್ಲಿ ದಾಖಲಾದ ಬೆಳೆಗಳ ಬೆಂಕಿ ಪ್ರಕರಣ ಕಡಿಮೆ ಮಾಡುವಲ್ಲಿ ಸರ್ಕಾರ ತಕ್ಕ ಮಟ್ಟಿಗೆ ಯಶಸ್ಸು ಕಂಡಿದ್ದು ಇದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.ಆದರೂ ಬೆಂಕಿ ಪ್ರಕರಣಗಳನ್ನು ಅರ್ಧಕ್ಕಿಂತ ಕಡಿಮೆ ಮಾಡುವಲ್ಲಿ ರಾಜ್ಯ ಸರ್ಕಾರದ ಪ್ರಯತ್ನಗಳು ಫಲ ನೀಡಿವೆಯೇ ಎಂಬುದನ್ನು ನಿರ್ಧರಿಸುವಲ್ಲಿ ಮುಂದಿನ ಕೆಲವು ವಾರಗಳು ನಿರ್ಣಾಯಕವಾಗಿವೆ ಎಂದು ಮೂಲಗಳು ಹೇಳಿವೆ.
ಪಂಜಾಬ್‌ನಲ್ಲಿ ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿ ಭತ್ತದ ಕಡ್ಡಿಗಳನ್ನು ಸುಡುವ ಅತ್ಯಂತ ಮಹತ್ವದ ಸಮಯವಾಗಿದೆ. ಇದರಿಂದ ವಾಯು ಮಾಲಿನ್ಯಕ್ಕೆ ಕಾರಣವಾಗಲಿದೆ.
ಇದರಿಂದ ಅಕ್ಕ ಪಕ್ಕದ ರಾಜ್ಯಗಳಾದ ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮದ್ಯ ಪ್ರದೇಶ ಸೇರಿದಂತೆ ಐದು ಉತ್ತರದ ರಾಜ್ಯಗಳಲ್ಲಿ ಶೇಕಡಾ ೭೦ ಕ್ಕಿಂತ ಹೆಚ್ಚು ವಾಯು ಮಾಲಿನ್ಯಕ್ಕೆ ಕಾರಣವಾಗಿದೆ. ಈ ಬೆಂಕಿಗಳು ಪ್ರದೇಶದ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುತ್ತವೆ,
ಅದರಲ್ಲೂ ವಿಶೇಷವಾಗಿ ದೆಹಲಿ, ರಾಷ್ಟ್ರ ರಾಜಧಾನಿ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ನವೆಂಬರ್ ವರ್ಷದ ಅತ್ಯಂತ ಕಲುಷಿತ ತಿಂಗಳಾಗಿ ಹೊರಹೊಮ್ಮಿದೆ.
