ಉದಯವಾಹಿನಿ, ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕೋಲಾರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ೨೦೨೩-೨೪ನೇ ಸಾಲಿನ ರಾಜ್ಯ ಮಟ್ಟದ ೧೪ ಮತ್ತು ೧೭ ವರ್ಷ ವಯೋಮಿತಿಯೊಳಗಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ/ಬಾಲಕಿಯರ ಬ್ಯಾಸ್ಕೆಟ್‌ಬಾಲ್ ಕ್ರೀಡಾಕೂಟವನ್ನು ಅಕ್ಟೋಬರ್ ೨೯ ರಂದು ಸಂಜೆ ೪.೦೦ ಗಂಟೆಗೆ ಕನಕ ಬ್ಯಾಸ್ಕೆಟ್ ಬಾಲ್ ಆಟದ ಮೈದಾನ, ಕಠಾರಿಪಾಳ್ಯ, ಬಿ.ಆರ್.ಸಿ. ಕಾಂಪೌಂಡ್, ಕೋಲಾರ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ನೇರವೆರಿಸುವರು.
