ಉದಯವಾಹಿನಿ, ಸೂರತ್‌: ಗುಜರಾತ್‌ನ ಸೂರತ್‌ ನಗರದ ಅಪಾರ್ಟ್ಮೆಂಟ್‌ನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶನಿವಾರ ಅನುಮಾನ ವ್ಯಕ್ತಪಡಿಸಿದ್ದಾರೆ.
ಏಳು ಮಂದಿಯ ಪೈಕಿ ಆರು ಜನರು ವಿಷಾ ಸೇವಿಸಿದ್ದು, ಒಬ್ಬ ವ್ಯಕ್ತಿ ನೇಣು ಬಿಗಿದುಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸೂರತ್‌ ನಗರದ ಸಿದ್ದೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗು ಒಂದು ಗಂಡು ಮಗು, ಇಬ್ಬರು ಹೆಣ್ಣು ಮಕ್ಕಳು(10ರಿಂದ 13 ವರ್ಷದ ಒಳಗಿನವರು) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.’ಕುಟುಂಬ ಹಣಕಾಸಿನ ಸಮಸ್ಯೆಗೆ ಸಿಲುಕಿದ್ದು, ತಮ್ಮಿಂದ ಹಣ ಪಡೆದವರು, ವಾಪಸ್‌ ನೀಡದ್ದಕ್ಕೆ ಆತ್ಯಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಡೇತ್‌ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಡಿಸಿಪಿ ಬರೋಟ್‌ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!