ಉದಯವಾಹಿನಿ ಅಫಜಲಪುರ :ಗ್ರಾಮೀಣ ಪ್ರದೇಶದಲ್ಲಿ ಜನರು ವಿವಾಹದಲ್ಲಿ ದುಂದು ವೆಚ್ಚ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.ಅನಾವಶ್ಯಕ ವೆಚ್ಚ ತಡೆಗೆ ಸಾಮೂಹಿಕ ವಿವಾಹ ಬಡವರ ಪಾಲಿಗೆ ಸಂಜೀವಿನಿ ಹಾಗೂ ವರದಾನವಾಗಿವೆ.ಎಂದು ಕರ್ನಾಟಕ ಮಹಾರಾಷ್ಟ್ರ ಗಡಿಭಾಗದ ಅಕ್ಕಲಕೋಟ ತಾಲೂಕಿನ ನಾಗಣಸೂರ ಗ್ರಾಮದ ತುಪ್ಪಿನ ಮಠದ ಮ ನಿ ಪ್ರ ಡಾ!! ಅಭಿನವ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು. ಅವರು ನಾಗಣಸೂರ ಗ್ರಾಮದ ಮಠದಲ್ಲಿ ಬಸವಲಿಂಗೇಶ್ವರ ಮಹಾಸ್ವಾಮಿಗಳ 91 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸಾಮೂಹಿಕ ವಿವಾಹಗಳು ಸಾಮರಸ್ಯದ ಪ್ರತೀಕವಾಗಿದ್ದು, ಸಮಾಜದಲ್ಲಿ ಸಮಾನತೆ ಸಹಕಾರ, ಸಹಬಾಳ್ವೆ ಬರಬೇಕಾದರೆ ಪ್ರತಿಯೊಂದು ಹಳ್ಳಿಗಳಲ್ಲಿ ವರ್ಷಕ್ಕೆ ಕನಿಷ್ಠ ಒಂದು ಬಾರಿ ಎಲ್ಲರೂ ಒಂದೆಡೆ ಸೇರಿ ಒಗ್ಗಟ್ಟಿನಿಂದ ಇಂತಹ ಮಾದರಿ ಮದುವೆ ಮಾಡುವುದು ಅಗತ್ಯವಾಗಿದೆ . ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಅಕ್ಕಲಕೋಟ ತಾಲೂಕಿನ ನಾಗಣಸೂರ ಗ್ರಾಮದ ಬಸವಲಿಂಗ ಶ್ರೀಗಳ ಮಠಕ್ಕೆ ಬಹು ದೊಡ್ಡ ಇತಿಹಾಸವಿದೆ. ಈ ಮಠದ ಲಿಂಗೈಕ್ಯ ಬಸವಲಿಂಗ ಶ್ರೀಗಳು ಮಹಾ ಪವಾಡ ಪುರುಷರಾಗಿದ್ದರು.ಇವರ ಮಹಿಮೆ ಅಪಾರವಾಗಿದೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು.ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಾಮೂಹಿಕ ವಿವಾಹದಲ್ಲಿ 50 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕರ್ನಾಟಕ ಮಹಾರಾಷ್ಟ್ರದ ವಿವಿಧ ಮಠಗಳ ಮಠಾಧೀಶರು ಜನಪ್ರತಿನಿಧಿಗಳಿದ್ದರು ಜಾತ್ರೆಯ ಅಂಗವಾಗಿ ಪುಣ್ಯಾರಾಧನೆ ಅಂಗವಾಗಿ ಬೆಳಿಗ್ಗೆ ಶ್ರೀಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಸಾಮೂಹಿಕ ವಿವಾಹ 7೦೦೦ ಜಂಗಮರ ಆರಾಧನೆ, 11 ಸಾವಿರ ಮುತ್ತೈದೆಯರ ಉಡಿ ತುಂಬುವ ಕಾರ್ಯಕ್ರಮ, ನಂತರ ಸಾವಿರಾರು ಭಕ್ತರಿಗೆ ಹೋಳಿಗೆ ತುಪ್ಪದ ಮಹಾಪ್ರಸಾದ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ನಂತರ ಸಾಯಂಕಾಲ ಐದು ಗಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಬಸವಲಿಂಗ ಸ್ವಾಮೀಜಿಗಳ ಭಾವಚಿತ್ರದ ಮೆರವಣಿಗೆ ಜರುಗಲಿದೆ.

Leave a Reply

Your email address will not be published. Required fields are marked *

error: Content is protected !!