
ಉದಯವಾಹಿನಿ ಪೀಣ್ಯ ದಾಸರಹಳ್ಳಿ: ಪರಮ ಪವಿತ್ರವಾದ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ಎಂದು ಶಾಸಕ ಎಸ್.ಮುನಿರಾಜು ಹೇಳಿದರು. ಅವರು ತಮ್ಮ ಸ್ವಗೃಹದ ಆವರಣದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಪ್ರದಾನ ಕಾರ್ಯದರ್ಶಿ ವಿನೋದ್ ಗೌಡ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಗಂಗಾಧರ್ ಸೇರಿದಂತೆ ಬಿಜೆಪಿ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
