ಉದಯವಾಹಿನಿ ಇಂಡಿ : ಮಹರ್ಷಿ ವಾಲ್ಮೀಕಿಯ ರಾಮಾಯಣದಲ್ಲಿ ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆಯಂತಹ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂದಿನ ಪೀಳಿಗೆ ಅವೆಲ್ಲವನ್ನೂ ಅರ್ಥೈಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ನಾದದ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಸಿ.ಎಂ.ಬoಡಗರ  ಹೇಳಿದರು.
 ತಾಲೂಕು ಆಡಳಿತ ವತಿಯಿಂದ ವಿಜಯಪುರ ರಸ್ತೆಯ ವಾಲ್ಮೀಕಿ ಸಭಾಭವನದಲ್ಲಿ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಅವರ ಜಯಂತಿಯಲ್ಲಿ ಉಪನ್ಯಾಸ ನೀಡಿ  ಮಾತನಾಡಿದರು.
 ವಾಲ್ಮೀಕಿ ರಾಮಾಯಣದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ನಾಗರಿಕತೆಯ ಬದಲಾವಣೆಗೆ ವಾಲ್ಮೀಕಿಯವರ ಬದುಕು ಒಂದು ಉತ್ತಮ ನಿದರ್ಶನವಾಗಿದೆ. ವಾಲ್ಮೀಕಿ ಬರೆದ ರಾಮಾಯಣ ಕೃತಿ ಪ್ರಪಂಚದ ಮಹಾನ್ ಗ್ರಂಥವಾಗಿದೆ ಎಂದರು.ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ ಮಾತನಾಡಿ “ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದೆ. ರಾಮಯಾಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ  ಎಂದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ,ಬಸವರಾಜ ಗೊರನಾಳ ಮಾತನಾಡಿದರು.
   ತಾಪಂ ಕಾರ್ಯನಿವಾಹಕ ಅಧಿಕಾರಿ ಬಾಬುರಾವ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಗ್ರೇಡ್-2 ತಹಶಿಲ್ದಾರ ಧನಪಾಲಶೆಟ್ಟಿ  ದೇವೂರ, ಬಿಇಓ ಟಿ.ಎಸ್. ಆಲಗೂರ, ವಾಲ್ಮೀಕಿ ಸಮಾಜದ ಅಧ್ಯಕ್ಷ ಅರ್ಜುನ ನಾಯ್ಕೋಡಿ, ಎಚ್.ಎಸ್. ಪಾಟೀಲ, ಕೃಷಿ ಅಧಿಕಾರಿ ಮಹಾದೇವಪ್ಪ ಏವೂರ, ಹೆಸ್ಕಾ ಎಇಇ ಎಸ್.ಆರ್. ಮೇಡೆದಾರ, ಭೀಮರಾಯ ಕೊಡತೆ, ದುಂಡಪ್ಪ ಹೂನ್ನಹಳ್ಳಿ, ಮುಕಂದ ಬೆಡರ, ಭಿಮರಯ ನಾಯ್ಕೋಡಿ, ಅರ್ಜುನ ನಾಯ್ಕೋಡಿ, ನಾಗಪ್ಪ ನಾಯ್ಕೋಡಿ, ಸಂಜೀವ ನಾಯ್ಕೋಡಿ, ಮಾರುತಿ ಕೊಡತೆ ಸೇರಿದಂತೆ ವಾಲ್ಮೀಕಿಯ ಸಮಾಜದ ಮುಖಂಡರು ಇದ್ದರು.

Leave a Reply

Your email address will not be published. Required fields are marked *

error: Content is protected !!