ಉದಯವಾಹಿನಿ,ಶಿಡ್ಲಘಟ್ಟ:  ಮಹರ್ಷಿ ವಾಲ್ಮೀಕಿ ರಚಿಸಿದ ಶ್ರೀ ರಾಮಾಯಣ ಸರ್ವಕಾಲಿಕವಾದದ್ದು ಮಹರ್ಷಿ ವಾಲ್ಮೀಕಿ ರವರು ರಚಿಸಿದ ರಾಮಾಯಣವನ್ನು ನಮ್ಮ ದೇಶ ಮಾತ್ರವಲ್ಲ ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿವೆ. ಈ ಮಹಾಕಾವ್ಯ ಇಂದಿಗೂ ಮಾನವೀಯತೆ ಧರ್ಮ ಸಂಸ್ಕಾರ ನೆಲೆಸಲು ಕಾರಣವಾಗಿದೆ ಎಂದು ಶಾಸಕ ಬಿ.ಎನ್ ರವಿಕುಮಾರ್ ಅಭಿಪ್ರಾಯ ಪಟ್ಟರು.ತಾಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯತಿಯ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಆವರಣದಲ್ಲಿ ವಾಲ್ಮೀಕಿ ಜಯಂತಿಯನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ತ್ರೀ ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದು ವಾಲ್ಮೀಕಿ ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿಯನ್ನು ಬೋದಿಸಿದ್ದಾರೆ ಎಂದರು.
ಲಗುನಾಯಕನಹಳ್ಳಿ ಮುನಿಯಪ್ಪ ಮಾತನಾಡಿ: ಭಾರತದ ಭವ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರಾಮಾಯಣದಂತಹ ಮೇರು ಕೃತಿಯನ್ನು ರಚಿಸಿದ ಮಹರ್ಷಿ ವಾಲ್ಮೀಕಿ ವಿಶ್ವ ಮಾನ್ಯ ದಾರ್ಶನಿಕರಾಗಿದ್ದಾರೆ. ರಾಮಾಯಣದ ಮೂಲಕ ರಾಜ ಧರ್ಮ ನೀತಿಶಾಸ್ತ್ರವನ್ನು ಜಗತ್ತಿಗೆ ಬೋಧಿಸಿದ ಶ್ರೀ ಮಹರ್ಷಿ ವಾಲ್ಮೀಕಿಯ ಪಾತ್ರ‌‌ ಸ್ಮರಣೀಯ ಎಂದು ತಿಳಿಸಿದರು .
ಇದೇ ವೇಳೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ತಲಕಾಲ ಬೆಟ್ಟದಲ್ಲಿರುವ ವಾಲ್ಮೀಕಿ ಸಮುದಾಯ ಭವನವನ್ನು ದುರಸ್ತಿ ಪಡಿಸಬೇಕೆಂದು ಶಾಸಕ ಬಿ ಎನ್ ರವಿಕುಮಾರ್ ಅವರಿಗೆ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಭಾರಿ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಮುನಿರಾಜು, ಬಂಕ್ ಮುನಿಯಪ್ಪ, ತಾದೂರು ರಘು, ಎನ್ ಮುನಿಯಪ್ಪ, ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟಸ್ವಾಮಿ, ಮುತ್ತೂರು ವೆಂಕಟೇಶ್, ಗಿರೀಶ್ ನಾಯಕ್, ವಾಲ್ಮೀಕಿ ಸಂಘದ ಅಧ್ಯಕ್ಷ ದ್ಯಾವಪ್ಪ, ಮತ್ತು ಇನ್ನು ಅನೇಕ ಸಮುದಾಯ ಮುಖಂಡರುಗಳ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!