ಉದಯವಾಹಿನಿ, ಕೋಲಾರ: ನಗರದ ವಾಲ್ಮೀಕಿ ಸಮುದಾಯ ಭವನಕ್ಕೆ ಸೇರಿದ ಜಾಗ ಒತ್ತುವರಿಯಾಗಿದ್ದರೆ ಕೊಡಲೇ ತೆರುವು ಮಾಡಿ ಸ್ವಾಧೀನಕ್ಕೆ ಪಡೆಸಿ ಕೊಂಡು ಎಲ್ಲರನ್ನು ಸಂಘಟಿಸಿ ಕೊಂಡು ಮುಂದಿನ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಿಂದ ಆಚರಿಸಲಾಗುವುದು ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು,ನಗರದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,
ಇಂದು ವಾಲ್ಮೀಕಿ ಜಯಂತಿ ಆಚರಿಸಲು ಪರ ವಿರೋಧಗಳು ವ್ಯಕ್ತವಾಗುತ್ತಿದೆ. ವಾಲ್ಮೀಕಿ ಜಯಂತಿ ಉದ್ಘಾಟನ ಕಾರ್ಯಕ್ರಮದಲ್ಲಿ ಯಾವೂದೇ ರಾಜಕೀಯ ಮಾಡ ಬಾರದು. ರಾಜಕೀಯವನ್ನು ಚುನಾವಣೆ ಸಮಯಕ್ಕೆ ಮಾತ್ರ ಮೀಸಲಿಟ್ಟು ಉಳಿದ ಅವಧಿಯಲ್ಲಿ ಅಭಿವೃದ್ದಿ ಕಾರ್ಯಕ್ರಮಗಳಿಗೆ ಕೈ ಜೋಡಿಸುವಂತಾಗ ಬೇಕು.
