ಉದಯವಾಹಿನಿ, ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖಂಡ ಅಜಿತ್ ಪವಾರ್ ಅವರಿಗೆ ಡೆಂಗಿ ದೃಢಪಟ್ಟಿದ್ದು, ಕೆಲವು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಜಿತ್ ಪವಾರ್ ಅವರು ರಾಜಕೀಯ ಮತ್ತು ಕಚೇರಿ ಕೆಲಸ, ಕಾರ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ.
ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಎನ್‌ಸಿಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು, ‘ಜೂನಿಯರ್ ಪವಾರ್ ಅವರು ಡೆಂಗಿ ಜ್ವರದಿಂದ ಬಳಲುತ್ತಿದ್ದು, ಕೆಲವು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿಲ್ಲ’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!