ಉದಯವಾಹಿನಿ ಕೆಂಭಾವಿ: ಟಂಟ ಪಲ್ಟಿಯಾಗಿ ಸ್ಥಳದಲ್ಲೆ ಬಾಲಕನೋರ್ವ ಮೃತಪಟ್ಟು ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಕೆಂಭಾವಿ-ನಗನೂರ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ. ನಗನೂರ ಗ್ರಾಮದಿಂದ ಪಟ್ಟಣಕ್ಕೆ ಆಗಮಿಸುತ್ತಿದ್ದ ಟಂಟ ವಾಹನದಲ್ಲಿ ಐದು ಜನ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ರಸ್ತೆಯ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಂಟ ವಾಹನ ಕಲ್ಲಿಗೆ ಗುದ್ದಿ ಪಲ್ಟಿಯಾಗಿದೆ. ಇದರಿಂದ ಆಕಾಶ (೧೨) ಎಂಬ ಬಾಲಕ ಸ್ಥಳದಲ್ಲೆ ಅಸು ನೀಗಿದರೆ. ಟಂಟ ಚಾಲಕನ ಸ್ಥಿತಿ ತೀವ್ರ ಗಂಭೀರವಾಗಿದೆ. ಗಾಯಾಳುಗಳಿಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
