ಉದಯವಾಹಿನಿ, ನವದೆಹಲಿ: ದೇಶದ ಪ್ರಥಮ ಗೃಹ ಸಚಿವ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 148ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಅನೇಕ ಗಣ್ಯರು ವಲ್ಲಭಭಾಯಿ ಪಟೇಲ್‍ಗೆ ಗೌರವ ಸೂಚಿಸಿದ್ದಾರೆ.
ನವದೆಹಲಿಯ ಪಟೇಲ್ ಚೌಕ್‍ನಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್, ದೆಹಲಿ ಎಲ್ಜಿ ವಿಕೆ ಸಕ್ಸೇನಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಪುಷ್ಪ ನಮನ ಸಲ್ಲಿಸಿದರು. ಪಟೇಲ್ ಅವರದ್ದು ಅದಮ್ಯ ಮನೋಭಾವ, ದೂರದೃಷ್ಟಿಯ ರಾಜಕಾರಣಿ ಮತ್ತು ಅವರು ನಮ್ಮ ದೇಶದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕತೆಗೆ ಅವರ ಕೊಡುಗೆ, ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಬಂದಿದೆ, ಅವರ ಸೇವೆಗೆ ನಾವು ಸದಾ ಋಣಿಯಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!