ಉದಯವಾಹಿನಿ, ಮಂಡ್ಯ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಗುರುತನ್ನು ಇನ್ನೂ ಅಧಿಕಾರಿಗಳು ಪತ್ತೆಹಚ್ಚಬೇಕಿದ್ದು, ಸೋಮವಾರ ತಡರಾತ್ರಿ ಮಂಡ್ಯ ನಗರ ಸಮೀಪದ ಬೆಸಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ಬಾರ್‌ನಲ್ಲಿ ಮದ್ಯ ಸೇವಿಸಿ ಹೊರಗೆ ಮಲಗಿದ್ದರು. ಮಧ್ಯರಾತ್ರಿ ಬೀದಿ ನಾಯಿಗಳು ಆತನ ಮೇಲೆ ದಾಳಿ ಮಾಡಿ, ಕೊಂದು ಹಾಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.
