ಉದಯವಾಹಿನಿ, ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕರ್ನಾಟಕದ ಹೈಕೋರ್ಟ್ ಒಪ್ಪಿಗೆ ನೀಡಿದೆ. ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಪಿಐಎಲ್ ಸಲ್ಲಿಕೆಯಾಗಿತ್ತು.
ಮಂಗಳವಾರ ಕರ್ನಾಟಕ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ.
ನವೆಂಬರ್ 1 ರಿಂದ 3 ರ ತನಕ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿ ಕಾರ್ಯಕ್ರಮ ನಡೆಸಬಹುದು. ಆದರೆ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕಾರ್ಯಕ್ರಮ ನಡೆಸಬಾರದು ಎಂದು ಸೂಚನೆ ನೀಡಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ಈ ಕುರಿತು ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಇನ್ನಿತರ ಪ್ರಾಧಿಕಾರಗಳಿಗೆ ಕೋರ್ಟ್ ಸೂಚನೆ ನೀಡಿದೆ.
