ಉದಯವಾಹಿನಿ, ಬೆಂಗಳೂರು : ದೇಶದ ವಿವಿಧೆಡೆ ವೇಗದ ಮತ್ತು ಐಶಾರಾಮಿ ಪ್ರಯಾಣ ಸೇವೆ ನೀಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು (Vade ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನಿಂದ ಧಾರವಾಡವರೆಗೆ ಸೇವೆ ನೀಡುತ್ತಿದೆ. ಈ ರೈಲನ್ನು ಕುಂದಾನಗರಿ ಬೆಳಗಾವಿಯವರೆಗೂ ವಿಸ್ತರಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ಪತ್ರದಲ್ಲಿ ಸಿದ್ದರಾಮಯ್ಯ ಅವರು, ‘ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿ ನಗರವರೆಗೆ ವಿಸ್ತರಿಸಲು ನಾನು ನಿಮ್ಮನ್ನು ಕೋರುತ್ತೇನೆ. ವಿಸ್ತರಣೆ ಆದಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಸಂಪರ್ಕ ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!