ಉದಯವಾಹಿನಿ, ಕನಕಪುರ: ಬ್ಲಾಸಮ್ ಶಾಲಾ ಆವರಣದಲ್ಲಿ ದಿನಾಂಕ 31.10.2023ರಂದು ತಾಲ್ಲೂಕು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕನಕಪುರ ಇವರ ಸಹಯೋಗದೊಂದಿಗೆ “ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನ” ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮದಡಿಯಲ್ಲಿ “ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ” ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಕನಕಪುರದ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎ.ಸಿ ಚನ್ನೇಗೌಡ ರವರು ಉದ್ಘಾಟನೆ ಮಾಡಿದರು. ಬ್ಲಾಸಮ್ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಗಂಗಾಂಬಿಕಾ ರವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ವಕೀಲರಾದ ಶ್ರೀ ಕಾಮೇಶ್ ರವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾದ ಶ್ರೀ ಕೆ.ಮಾದೇಗೌಡರವರು “ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕುರಿತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳು, ಬಾಲ್ಯ ವಿವಾಹವನ್ನು ತಡೆಗಟ್ಟುವುದರಿಂದ ಆಗುವ ಪ್ರಯೋಜನಗಳು ಹಾಗೂ ಬಾಲ್ಯ ವಿವಾಹವನ್ನು ತಡೆಗಟ್ಟಲು ಇರುವ ಕಾಯಿದೆಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
