
ಉದಯವಾಹಿನಿ, ಅಫಜಲಪುರ: ಪಟ್ಟಣದ ತಾಲೂಕು ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪ್ರಥಮ ಬಾರಿಗೆ ಕೆಡಿಪಿ ಸಭೆಗೆ ಭಾಗಿಯಾದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸುಮಾರು 113.28 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು ಯಾವೊಂದು ಗ್ರಾಮದಲ್ಲಿ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ.ಎಂದು ಜನರು ದುರುತ್ತಿದ್ದಾರೆ.ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು. ನಿಮ್ಮ ಕ್ಷೇತ್ರದ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಹಣವನ್ನು ತರುತ್ತಾರೆ. ನೀವು ಹಣವನ್ನ ಸಮರ್ಪಕವಾಗಿ ಬಳಕೆ ಮಾಡಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು. ನಂತರ ಮಾತನಾಡಿದ ಶಾಸಕ ಎಮ್.ವೈ.ಪಾಟೀಲ್ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿಯಾಗಲು ಸಾಧ್ಯ. ಗ್ರಾಮೀಣ ಭಾಗದ ಜನರಿಗೆ ಬರಗಾಲ ಪರಸ್ಥಿತಿ ನಿರ್ಮಾಣವಾಗಿರುವುದರಿಂದ, ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದೆಂದು ಸಾಕಷ್ಟು ಹಣವನ್ನ ಬಿಡುಗಡೆ ಮಾಡಿಸಿದ್ದೆನೆ.ಆದರೆ ಸಂಬಂಧಪಟ್ಟ ಕಾರ್ಯನಿರ್ವಾಹಕ ಅಭಿಯಂತರರು ಮಂದಗತಿಯ ಕಾರ್ಯ ನಿರ್ವಹಿಸುವುದು ಸರಿಯಲ್ಲ ಎಂದರು. ಈಗಾಗಲೇ ಪಟ್ಟಣದ ಮುಖ್ಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಹೆಚ್ಚಿನ ಅನುದನವೂ ತರುವಲ್ಲಿ ಪ್ರಯತ್ನ ಮಾಡುವೆ ಎಂದರು.ಈಗಾಗಲೇ ಬರಗಾಲ ಘೋಷಣೆಯಾಗಿರುವುದರಿಂದ, ಕೂಡಲೇ ರೈತರಿಗೆ ಹಣ ಬಿಡುಗಡೆ ಮಾಡಲು ಸರಕಾರ ನಿರ್ಣಯತಗೆದುಕೊಂಡಿದೆ.ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳು ಮತ್ತು ಬೆಳೆ ಸರ್ವೇ ಮಾಡಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರಿಗೆ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮತ್ತು ಹಗಲು ಹೊತ್ತಲ್ಲಿ ವಿದ್ಯುತ್ ಪೂರೈಕೆ ಮಾಡಲು ವಿದ್ಯುತ್ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಂತರ ಅಧಿಕಾರಿಗಳಿಂದ ಕಾಮಗಾರಿಗಳ ಬಗ್ಗೆ ವರದಿಯನ್ನ ಪರಿಶೀಲಿಸಿ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಇದೆ ಸಂದರ್ಭದಲ್ಲಿ ತಹಶೀಲ್ದಾರ ಸಂಜೀವಕುಮಾರ ದಾಸರ,ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಪಿ, ಸೇರಿದಂತೆ ತಾಲೂಕು ಅಧಿಕಾರಿಗಳ ವೃಂದವು ಉಪಸ್ಥಿತರಿದ್ದರು.
