
ಉದಯವಾಹಿನಿ,ಚಿತ್ರದುರ್ಗ: ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞೆ ಮತ್ತು ಸರ್ಧಾರ್ ವಲ್ಲಭಾಯ್ ಪಟೇಲ್ ಅವರ ಜನ್ಮದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಬೋಧಿಸಿ, ಭಾರತದ ಏಕೀಕರಣ ಕಾರ್ಯದಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ಅವರು ಕಾರ್ಯ ಮತ್ತು ಶ್ರಮದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಅಧಿಕಾರಿಗಳು, ಯೋಜನಾ ನಿರ್ದೇಶಕರು, ಉಪ ಕಾರ್ಯದರ್ಶಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಬ್ಬಂದಿ ವರ್ಗದವರು ಇದ್ದರು.
