ಉದಯವಾಹಿನಿ, ಬೆಂಗಳೂರು: ಬಿಬಿಎಂಪಿ ಅಧಿಕಾರಿ, ನೌಕರರ ಮುಂಬಡ್ತಿ, ಖಾಲಿ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಬಿಬಿಎಂಪಿಯಿಂದ ಆಯೋಜಿಸುವ ನಾಡ ಪ್ರಭು ಕೆಂಪೇಗೌಡ ಜಯಂತಿ ಸಮಾರಂಭ ಆಯೋಜನೆಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ತಿಳಿಸಿದ್ದಾರೆ.
ಮ೦ಗಳವಾರ ಸಂಘದ ಸದಸ್ಯರು ಹಾಗೂ ಬಿಬಿಎಂಪಿ ಅಧಿಕಾರಿ, ನೌಕರರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವೃಂದ ಮತ್ತು ನೇಮಕಾತಿ ನಿಯಾಮವಳಿ, ಮುಂಬಡ್ತಿ, ಕಾನೂನುಬಾಹಿರವಾಗಿ ಎರವಲು ಸೇವೆ ಅಧಿಕಾರಿಗಳನ್ನು ಬಿಬಿಎಂಪಿಗೆ ನಿಯೋಜನೆ ಮಾಡಿರುವುದು, ಪಾಲಿಕೆಯಲ್ಲಿನ ೬,೪೧೪ ಖಾಲಿ ಹುದ್ದೆಗಳ ರ‍್ತಿ ಹಾಗೂ ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ಪಾಲಿಕೆ ಅಧಿಕಾರಿ ನೌಕರರ ವಿವಿಧ ಸಮಸ್ಯೆಗಳ ಬಗ್ಗೆ ರ‍್ಚೆ ನಡೆಸಲಾಯಿತು. ನೌಕರರ ಎಲ್ಲ ಬೇಡಿಕೆಗಳಿಗೆ ಡಿಸಿಎಂ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!