ಉದಯವಾಹಿನಿ, ಬೆಂಗಳೂರು:  ಕನ್ನಡ ಭಾಷಿಕರು, ಪ್ರದೇಶ ಏಕೀಕರಣವಾದ ರಾಜ್ಯೋತ್ಸವ ಸಡಗರ ಹಾಗೂ ಕರ್ನಾಟಕ ಎಂಬ ಮರು ನಾಮಕರಣವಾಗಿ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಸುವರ್ಣ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ.
ಕನ್ನಡಿಗರ ಅಸ್ತಿತ್ವ ಮತ್ತು ಆಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಬಾವುಟ ಇಂದು ರಾಜ್ಯದೆಲ್ಲೆಡೆ ಹಾರಾಡುತ್ತಿದ್ದು, ಎಲ್ಲೆಡೆ ಕನ್ನಡ ಡಿಂಡಿಮ ಮೊಳಗಲಿದೆ. ಈ ಸುದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಗಣ್ಯರು ಸಾಮಾಜಿಕ ಜಾಲತಾಣ ಮೂಲಕ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ.ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು.

Leave a Reply

Your email address will not be published. Required fields are marked *

error: Content is protected !!