
ಉದಯವಾಹಿನಿ ಚಿತ್ರದುರ್ಗ : ಜಿಲ್ಲಾಡಳಿತದ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಏರ್ಪಡಿಸಿದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ, ಯೋಗ ಮತ್ತು ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿರುವ ಚಿತ್ರದುರ್ಗದ ಯೋಗ ಗುರು ಹಾಗೂ ಭಾರತೀಯ ಯೋಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರವಿ ಕೆ.ಅಂಬೇಕರ್ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ 28 ಸಾಧಕರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಅವರು ಸನ್ಮಾನಿಸಿ ಗೌರವಿಸಿದರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ನಾಗವೇಣಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಸ್ವಾಮಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
