
ಉದಯವಾಹಿನಿ,ಚಿಂಚೋಳಿ: ಪಟ್ಟಣದ ಚಂದಾಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಪೂಜ್ಯ ಡಾ.ಶರಣಬಸಪ್ಪಾ ಅಪ್ಪಾರವರ 89ನೇ ಜನ್ಮದಿನೋತ್ಸವ ಮತ್ತು ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಚಿ.ದೊಡ್ಡಪ್ಪ ಅಪ್ಪಾರವರ 7ನೇ ಜನ್ಮದಿನೋತ್ಸವ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಮನರಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್.ಅಪ್ಪಾರವರ 54ನೇ ಜನ್ಮದಿನೋತ್ಸವ ಅಂಗವಾಗಿ ಆಸ್ಪತ್ರೆಯ ಬಡರೋಗಿಗಳಿಗೆ ಹಣ್ಣು ಹಂಪಲು ವಿತರಣೆಯನ್ನು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸಂಜೀವಕುಮಾರ ಪಾಟೀಲ ನೇತೃತ್ವದಲ್ಲಿ ಮಾಡಲಾಯಿತು.ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಕ ಅಧಿಕಾರಿ ಶಂಕರ ರಾಠೋಡ್,ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ,ತಾಲೂಕ ಆರೋಗ್ಯ ಅಧಿಕಾರಿ ಡಾ.ಮಹಮ್ಮದ್ ಗಫಾರ,ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ಸಂತೋಷ್ ಪಾಟೀಲ್,ಬಸವರಾಜ ಚಿಮ್ಮಾಇದಲಾಯಿ,ಸುರೇಶ್ ದೇಶಪಾಂಡೆ,ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
