
ಉದಯವಾಹಿನಿ ಶಿಡ್ಲಘಟ್ಟ: ದೇಶ ವಿದೇಶಗಳಲ್ಲಿ ವಾಸಿಸುವ ನಮ್ಮ ಕರ್ನಾಟಕದ ಜನತೆ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿರುವುದು ನಮ್ಮ ನಿಮ್ಮಲ್ಲರ ಹೆಮ್ಮೆ ಎಂದು ಶಾಸಕ ರವಿಕುಮಾರ್ ತಿಳಿಸಿದರು.ನಗರದ ತಾಲ್ಲೂಕು ಕಛೇರಿಯಲ್ಲಿ ಹಾಗೂ ಬಸ್ ನಿಲ್ದಾಣದ ಶ್ರೀ ಸಲ್ಲಾಪುರಮ್ಮ ದೇವಸ್ಥಾನದ ಮುಂಭಾಗ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ, ಕನ್ನಡಪರ ಸಂಘಟನೆಗಳಿಂದ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಮೈಸೂರು ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ ಈ ವರ್ಷ ವಿಶೇಷ ರೀತಿಯಲ್ಲಿ ಶಿಡ್ಲಘಟ್ಟ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದು ಆ ಭುವನೇಶ್ವರಿ ದೇವಿ ಸಮಸ್ತ ಜನತೆಗೆ ಆರೋಗ್ಯ ಜೊತೆಗೆ ಮಳೆ, ಬೆಳೆಯಾಗಿ ನಾಡು ಸುಬೀಕ್ಷೆಯಿಂದಿರಲು ಆ ತಾಯಿ ಭವನೇಶ್ವರಿ ಕಾಪಾಡಲಿ ಎಂದರು.ಭುವನೇಶ್ವರಿ ತಾಯಿ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಿದರು. ತಾಲ್ಲೂಕಿನ ಪಂಚಾಯಿತಿಗಳಿಂದ ಪಲ್ಲಕ್ಕಿಗಳೊಂದಿಗೆ ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಸಂದರ್ಭದಲ್ಲಿ ತಹಶಿಲ್ದಾರ್ ಬಿ.ಎನ್.ಸ್ವಾಮಿ, ಕಾರ್ಯನಿರ್ವಹಣಾಧಿಕಾರಿ ಜಿ.ಮುನಿರಾಜು, ಆರಕ್ಷಕ ವೃತ್ತ ನಿರೀಕ್ಷಕ ಎಂ.ಶ್ರೀನಿವಾಸ್, ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಬಿ.ಇ.ಓ ನರೇಂದ್ರಕುಮಾರ್,ತಾಲ್ಲೂಕು ಕಸಾಪ ಅಧ್ಯಕ್ಷ ಅನಂತಕೃಷ್ಣ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಮತ್ತಿತರರು ಹಾಜರಿದ್ದರು.
