
ಉದಯವಾಹಿನಿ ದೇವರಹಿಪ್ಪರಗಿ: ಅಂಗವೈಕಲ್ಯ ಹೊಂದಿದವರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಸರ್ಕಾರ ತ್ರಿಚಕ್ರ ವಾಹನವನ್ನು ನೀಡುತ್ತಿದ್ದು ಇದರ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ನಡೆಸುವಂತಾಗಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.ಪಟ್ಟಣದ ಶಾಸಕರ ಮಾದರಿ ಶಾಲಾ ಆವರಣದಲ್ಲಿ ಬುಧವಾರದಂದು 2022-23 ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ 22ಜನ ವಿಕಲಚೇತನರ ತ್ರಿಚಕ್ರ ವಾಹನಗಳ ಸಾಂಕೇತಿಕವಾಗಿ ವಿತರಣೆ ಮಾಡಿ ಮಾತನಾಡಿದ ಅವರು, ಅಂಗವಿಕಲರು ಮುಖ್ಯವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆ ರೂಪಿಸಿ ಪ್ರತ್ಯೇಕ ಅನುದಾನ ಮೀಸಲಿಡುತ್ತಿದೆ. ಅಂಗವಿಕರು ನ್ಯೂನತೆಯ ಬಗ್ಗೆ ಮಾನಸಿಕವಾಗಿ ಕುಗ್ಗದೇ ಆತ್ಮಸ್ಥೈರ್ಯ ರೂಢಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ ಎಂದರು.
ಪ್ರಾಸ್ತಾವಿಕವಾಗಿ ತಾಪಂ ಇಓ ಭಾರತಿ ಚೆಲುವಯ್ಯ ಅವರು ಮಾತನಾಡಿ, ಅಂಗವಿಕಲರು ತ್ರಿಚಕ್ರ ವಾಹನದ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದೆ ಬರಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಸಿಂದಗಿ, ಪಿಎಸ್ಐ ಬಸವರಾಜ ತಿಪ್ಪಾರೆಡ್ಡಿ,ಪ.ಪಂ ಮುಖ್ಯಾಧಿಕಾರಿ ಎಲ್.ಡಿ. ಮುಲ್ಲಾ,ತಾಪಂ ಯೋಜನಾಧಿಕಾರಿ ಶ್ರೀನಿವಾಸ ಪವಾರ, ಅಂಗವಿಕಲರ ಇಲಾಖೆ ಅಧಿಕಾರಿ ಮುತ್ತುರಾಜ ಸಾತಿಹಾಳ,ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಚನ್ನವೀರಪ್ಪ ಕುದರಿ ಸೇರಿದಂತೆ ಪಟ್ಟಣದ ಪ್ರಮುಖರು, ಗಣ್ಯರು,ಪ.ಪಂ.ಸದಸ್ಯರು ಹಾಗೂ ಫಲಾನುಭವಿಗಳು ಇದ್ದರು.
