ಉದಯವಾಹಿನಿ , ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಬರುವ ಕೆಲವು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ದೊರೆತಿದೆ. ವಿಶೇಷವಾಗಿ ಕರಾವಳಿ, ಗುಡ್ಡಗಾಡು ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮಳೆಯಿಲ್ಲದೆ ಕಂಗಾಲಾಗಿದ್ದ ಜನತೆಗೆ ಕೊಂಚ ಈ ಮಳೆ ಸ್ವಲ್ಪ ಮಟ್ಟಿಗೆ ನೆಮ್ಮದಿ ನೀಡುವ ಸಾಧ್ಯತೆ ಇದೆ.
ಆದರೆ, ಉತ್ತರ ಒಳನಾಡು ಅಥವಾ ಕಲ್ಯಾಣ ರ‍್ನಾಟಕದಲ್ಲಿ ಹೆಚ್ಚಾಗಿ ಬಿಸಿಲಿನ ವಾತಾವರಣ ಎಂದಿನಂತೆ ಮುಂದುವರಿಯಲಿದೆ.
ನಾಳೆಯಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಉಳಿದಂತೆ ಕಲ್ಯಾಣ ರ‍್ನಾಟಕದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
