ಉದಯವಾಹಿನಿ, ಬೆಂಗಳೂರು: ಕನ್ನಡ ನಾಡು ನುಡಿ, ಸಾಹಿತ್ಯ, ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸುವ ಸದುದ್ದೇಶದಿಂದ “ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ಸಿಂಗಾಪುರದಲ್ಲಿ ಹಮ್ಮಿಕೊಂಡಿರುವ “ಎರಡನೇ ವಿಶ್ವ ಕನ್ನಡ ಹಬ್ಬಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬೆಂಬಲ ಸೂಚಿಸಿದ್ದಾರೆ.
ಸಚಿವರನ್ನು ಭೇಟಿ ಮಾಡಿದ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷ ಶಿವಕುಮಾರ್ ನಾಗರ ನವಿಲೆ ಎರಡನೇ ವಿಶ್ವ ಕನ್ನಡ ಹಬ್ಬದ ಸಂಪೂರ್ಣ ರೂಪುರೇಶೆಗಳನ್ನು ಈ ಸಂದರ್ಭದಲ್ಲಿ ಸಚಿವರಿಗೆ ವಿವರಿಸಿದರು. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ಮಹತ್ತರವಾದ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು , ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವ ಕೆಲಸ. ಮಾಡುತ್ತಿರುವ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಗೆ ಶುಭಾಶಯಗಳು. ಕಾರ್ಯಕ್ರಮಕ್ಕೆ ನಾನು ಕೂಡ ಆಗಮಿಸಲಿದ್ದೆನೆ ಜೊತೆಗೆ ನಮ್ಮ ಸಹಕಾರ ಸದಾ ನಿಮ್ಮೊಂದಿಗಿದೆ. ಒಟ್ಟಾಗಿ ಯಶಸ್ವಿಗೊಳಿಸೋಣ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!