ಉದಯವಾಹಿನಿ, ಕೂಡ್ಲಿಗಿ : ತಾಲೂಕಿನ ಕಾನಾಹೊಸಹಳ್ಳಿ ಬಸ್ ನಿಲ್ದಾಣದ ಬಳಿ ಆಟೋ,ಟ್ಯಾಕ್ಸಿ ಚಾಲಕರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳಿಂದ ಬುಧವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ, ವಿಶೇಷ ಪೂಜಾ ನೆರವೇರಿಸಿ ನಂತರ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಿತು.
ಆಟೋ ಹಾಗೂ ಟ್ರಾಕ್ಸಿಗಳೊಂದಿಗೆ ತೆರೆದ ವಾಹನದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ಪಟ್ಟಣದ ಸಂಗೋಳಿ ರಾಯಣ್ಣ ವೃತ್ತದಿಂದ ಪ್ರಮುಖ ರಸ್ತೆಯಲ್ಲಿ ಸಾಗಿ ಕನಕ ದಾಸರ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ಬಸ್ ನಿಲ್ದಾಣಕ್ಕೆ ಮೆರವಣಿಗೆ ತಲುಪಿತು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಚೇತನ್ ಎ.ಸಿ,ಸದಸ್ಯ ಶಿವಕುಮಾರ್, ಮುಖಂಡರಾದ ಸತೀಶ್ ಎಚ್.ಬಿ ಹಾಗೂ ಆಟೋ, ಟ್ಯಾಕ್ಸಿ ಚಾಲಕರು, ಯುವಕರು ಇದ್ದರು.
