ಉದಯವಾಹಿನಿ, ಭಾಲ್ಕಿ: ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಸ್ವಾಭಿಮಾನಿ ಬಣದ ಕಲಬುರಗಿ ವಿಭಾಗೀಯ ಉಸ್ತುವಾರಿ ಅಧ್ಯಕ್ಷ ಸಂಗಮೇಶ ಗುಮ್ಮೆ ಅವರನ್ನು ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೀದರ್‍ನಲ್ಲಿ ಬುಧವಾರ ಜಿಲ್ಲಾಡಳಿತದ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಕಳೆದ ದಶಕದಿಂದ ಸಲ್ಲಿಸುತ್ತಿರುವ ಕನ್ನಡ ಸೇವೆಯನ್ನು ಪರಿಗಣಿಸಿ ಗುಮ್ಮೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಚಿವ ರಹೀಂಖಾನ್, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ರಘುನಾಥರಾವ ಮಲ್ಕಾಪೂರೆ, ಡಿಸಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಸೇರಿದಂತೆ ಹಲವರು ಇದ್ದರು.
