ಉದಯವಾಹಿನಿ, ಚಿತ್ರದುರ್ಗ: 2023ರ ಸಾಲಿನ ಚಿತ್ರದುರ್ಗ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರಿವ ಜೆ.ಎನ್ ಕೋಟೆ ಆಯುಷ್ ಆರೋಗ್ಯ ಕೇಂದ್ರದ ಯೋಗ ತರಬೇತುದಾರ ಶ್ರೀ ರವಿ ಕೆ.ಅಂಬೇಕರ್ ರವರಿಗೆ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಸನ್ಮಾಸಿ ಗೌರವಿಸಲಾಯಿತು.ನಗರದ ಜಿಲ್ಲಾ ಪಂಚಾಯತಿ ಕಛೇರಿ ಆವರಣದಲ್ಲಿರುವ ಜಿಲ್ಲಾ ಆಯುಷ್ ಕಛೇರಿಯ ಸಭಾ ಭವನದಲ್ಲಿ  ಜೆ ಎನ್ ಕೋಟೆ ಸರ್ಕಾರಿ ಆಯುರ್ವೇದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಆಡಳಿತಾಧಿಕಾರಿ ಶ್ರೀಮತಿ ಡಾ.ವಿಜಯಲಕ್ಷ್ಮಿ ಸನ್ಮಾನಿತರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ಶುಭ ಕೋರಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ ನಾಗಸಮುದ್ರ ಮಾತನಾಡಿ ” ರವಿ ಕೆ.ಅಂಬೇಕರ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಆಯುಷ್ ಜಿಲ್ಲಾ ಇಲಾಖೆಗೆ ಸಂತಸ ತಂದಿದ್ದು ಶ್ರೀಯುತರು ಯೋಗ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೀರ್ತಿಗಳಿಸಲಿ” ಎಂದು ಹಾರೈಸಿದರು.
ಇದೇ ಸಂಧರ್ಭದಲ್ಲಿ ಹಿರಿಯ ಆಯುಷ್ ವ್ಯದ್ಯಾಧಿಕಾರಿ ಡಾ.ಟಿ.ಶಿವಕುಮಾರ್ ಸನ್ಮಾನಿತರನ್ನು ಕಾರ್ಯಕ್ರಮದಲ್ಲಿ ಪರಿಚಯಿಸುತ್ತಾ ಮಾತನಾಡಿ ” ಶ್ರೀಯುತ ರವಿ ಅಂಬೇಕರ್ ರವರರು ಚಿತ್ರದುರ್ಗ ಜಿಲ್ಲೆಯಲ್ಲಿ ಬಹಳ ವರ್ಷಗಳಿಂದ ಯೋಗ ಕ್ಷೇತ್ರದ ಸೇವೆಯಲ್ಲಿ ನಿರತರಾಗಿದ್ದು ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ತಮ್ಮದೇ ಆದ ಭಾರತೀಯ ಯೋಗ ಶಿಕ್ಷಣ ಸಂಸ್ಥೆಯ ಮೂಲಕ ಉಚಿತ ಯೋಗ ಶಿಬಿರಗಳನ್ನು ಆಯೋಜಿಸಿ ಗ್ರಾಮೀಣ ಭಾಗದ ಜನರಿಗೆ ಯೋಗದ ಮಹತ್ವವನ್ನು ಸಾರುತ್ತಾ ಬಂದಿದ್ದು ಯೋಗ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸುವುದರ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದಾರೆ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಇವರು ನಮ್ಮ ಆಯುಷ್ ಇಲಾಖೆಯಲ್ಲಿ ಯೋಗ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಆಯುಷ್ ಇಲಾಖೆಯ ಎಲ್ಲರಿಗೂ ಸಂತಸ ತಂದಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು, ಕಛೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!