
ಉದಯವಾಹಿನಿ, ರಾಮದುರ್ಗ: ಕಲುಷಿತ ಆಹಾರ ಸೇವಿಸಿದ ಪರಿಣಾಮ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ ತಾಲೂಕಿನ ಸಾಲಹಳ್ಳಿಯ ಅಲ್ಪಸಂಖ್ಯಾತ ಮುರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.ಸಾಲಹಳ್ಳಿಯ ಮುರಾರ್ಜಿ ವಸತಿ ಶಾಲೆಯಲ್ಲಿ ಬೆಳಿಗ್ಗೆ ಉಪಹಾರಕ್ಕಾಗಿ ಪಲಾವು ಸೇವಿಸಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ಮೂವರು ವಿದ್ಯಾರ್ಥಿಗಳು ವಾಂತಿ ಮಾಡುತ್ತ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಿದ್ಯಾರ್ಥಿಗಳ ಹೊತ್ತೋಯ್ದು ದಾಖಲಿಸಿದ್ದಾರೆ. ಆರೋಗ್ಯ ಕೇಂದ್ರದ ವೈದ್ಯರು ಅಸ್ವಸ್ಥರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ.ಕಳೆದೆರಡು ತಿಂಗಳಿನಿಂದ ಊಟದಲ್ಲಿ ನುಶಿ ಹುಳಗಳು ಬರುತ್ತಿರುವುದನ್ನು ಹಾಸ್ಟೆಲ್ ವಾರ್ಡನ್ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಮಾಹಿತಿ ನೀಡಿದ್ದಾನೆ.ವೇಳೆ ಚಿಕಿತೆ ನೀಡಿದ ಆಸ್ಪತ್ರೆ ವೈದ್ಯರು ಬೇಧಿಯಿಂದ ಮಾದ್ಯಮದವರೊಂದಿಗೆ ಮಾತನಾಡಿ, ವಾಂತಿ ಬಳಲುತ್ತಿದ್ದ ವಿದ್ಯಾರ್ಥಿಗಳಿಗೆ ಚಿಕ್ಕ ಮಕ್ಕಳ ತಜ್ಞರ ಸಲಹೆಯಂತೆ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಅಪಾಯವಿಲ್ಲ. ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.ಭೇಟೆ: ರಾಮದುರ್ಗ ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಸಾಲಹಳ್ಳಿಯ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.
