ಉದಯವಾಹಿನಿ, ಮಾಲೂರು: ಕರ್ನಾಟಕ ಏಕೀಕರಣಗೊಂಡು ೫೦ ವರ್ಷಗಳ ತುಂಬಿದ ಹಿನ್ನೆಲೆಯಲ್ಲಿ ೬೮ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಹಾಗೂ ವಿದ್ಯುತ್ ಘೋಷಣೆ ಮಾಡಿರುವುದು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಬಡ ಹಾಗೂ ಮಾಧ್ಯಮ ವರ್ಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಪಟ್ಟಣದ ಮಹಾರಾಜ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ತಾಲೂಕು ಆಡಳಿತದ ಸಹಕಾರದಿಂದ ಹಮ್ಮಿಕೊಂಡಿರುವ ಮೂರು ದಿನಗಳ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಏಕೀಕರಣಗೊಂಡು ೫೦ ವರ್ಷಗಳು ತುಂಬಿದೆ ರಾಜ್ಯವು ಇನ್ನಷ್ಟು ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಣಬೇಕಾಗಿದೆ.
