ಉದಯವಾಹಿನಿ, ಬೆಂಗಳೂರು: ನಿಮ್ಮ ಸರ್ಕಾರದಲ್ಲಿ ಅತೃಪ್ತ ಶಾಸಕರ ದೊಡ್ಡಪಟ್ಟಿ ಇದೆ. ನಾನು ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದೀರಿ.
ಸಿದ್ದರಾಮಯ್ಯ ಅವರೇ ನಿಮಗೆ ಈ ದೌರ್ಭಾಗ್ಯ ಬರಬಾರದಿತ್ತು. ನೀವು ರಾಜೀನಾಮೆ ನೀಡುವುದು ಸೂಕ್ತ. ಸಿಎಂ ಡಿಸಿಎಂ ಇಬ್ಬರೂ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮಂತ್ರಿಗಳು, ಶಾಸಕರು ಸೇರಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ. ಕೂಡಲೇ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.ನವದೆಹಲಿ ಪ್ರವಾಸದಿಂದ ವಾಪಸ್ ಆದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಅವನತಿ ನಿನ್ನೆಯಿಂದ ಆರಂಭವಾಗಿದೆ. ಸಿಎಂ ಆಗಿರೋ ಸಿದ್ದರಾಮಯ್ಯ ನಾನೇ ಐದು ವರ್ಷ ಸಿಎಂ ಅಂತ ಹೇಳಿಕೆ ನೀಡಿದ್ದಾರೆ. ಅದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಇದರ ತೀರ್ಮಾನ ಕೇಂದ್ರ ನಾಯಕರು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದರ ಅರ್ಥ ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿರುವುದಿಲ್ಲ ಅನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದರು.
