ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಪ್ರತಿಮಾರವರ ಬರ್ಬರ ಹತ್ಯೆ ನಡೆದಿದೆ. ಇದು ಬೆಂಗಳೂರಿನ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಚಾಕುವಿನಿಂದ ಕತ್ತು ಸೀಳಿ ಕೊಲೆಗಡುಕರು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಕುವೆಂಪು ನಗರದ ಗೋಕುಲ್ ಅಪಾರ್ಟ್‌ಮೆಂಟ್ ಬಳಿಯ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಹತ್ಯೆಗೀಡಾಗಿದ್ದಾರೆ. ಹಿಂದೆ ಹತ್ತು ಹಲವು ಅನುಮಾನಗಳು ವ್ಯಕ್ತವಾಗಿದ್ದು, ಗಣಿ ದಂಧೆ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದ ಅಧಿಕಾರಿ ಪ್ರತಿಮಾ(೩೭) ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
