ಉದಯವಾಹಿನಿ, ಮೈಸೂರು: ಜಾತಿ ಜನಗಣತಿ ಕುರಿತಂತೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ವರದಿ ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಒತ್ತಾಯಿಸಿದ್ದಾರೆ. ಇದೀಗ ಈ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಮೈಸೂರಿನ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.’ವರದಿಯೇ ನನ್ನ ಕೈ ಸೇರಿಲ್ಲ. ಆಗಲೇ ಅದಕ್ಕೆ ವಿರೋಧ ಎಂದರೆ ನಾನೇನು ಮಾಡಲಿ? ವರದಿಯಲ್ಲಿ ಏನಿದೆ ಏಂಬುದೇ ಗೊತ್ತಿಲ್ಲ. ಅಂಕಿ ಅಂಶವೇ ತಿಳಿಯದೆ, ಅದರ ಬಗ್ಗೆ ಮಾತನಾಡುವುದು ಹೇಗೆ‌? ನವೆಂಬರ್ ಒಳಗೆ ವರದಿ ಕೊಡಬಹುದೆನೋ, ಕೊಡಲಿ ತದನಂತರ ನೋಡೋಣ’ ಎಂದು ಸಿಎಂ ಹೇಳಿದರು.

‘ಈಶ್ವರಪ್ಪ ಒಂದು ಸವಕಲು ನಾಣ್ಯ. ಅವರಿಗೆ ಸವಕಲು ಆಗಿರುವ ಕಾರಣಕ್ಕೆ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆಯೇ ಇಲ್ಲ. ಕಾಂತರಾಜು ವರದಿ ಪರ ವಿಧಾನಸಭೆಯಲ್ಲಿ ಅವರು ಮಾತನಾಡಿಲ್ವಾ? ಈಗ ಅದನ್ನು ಸುಟ್ಟು ಹಾಕುತ್ತೇವೆ ಎಂದರೆ ಅದರ ಅರ್ಥವೇನು. ಈಶ್ವರಪ್ಪ ಮಾತುಗಳಿಗೆ ಹೆಚ್ಚು ಬೆಲೆ ಕೊಡಬೇಡಿ‌’ ಎಂದರು.

Leave a Reply

Your email address will not be published. Required fields are marked *

error: Content is protected !!