ಉದಯವಾಹಿನಿ, ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಹಲವು ರ‍್ಷಗಳಿಂದ ನೆನಗುದಿಗೆ ಬಿದ್ದಿರುವ ಎಸ್ಸಿ,ಎಸ್ಟಿ, ಹಿಂದುಳಿದ, ಅಲ್ಪಸಂಖ್ಯಾತರು ಹಾಗೂ ರ‍್ಥಿಕ ಹಿಂದುಳಿದವರ ಭೂಮಿಗೆ ಸಾಗುವಳಿ ಚೀಟಿ ನೀಡಬೇಕೆಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ನೇತೃತ್ವದಲ್ಲಿ ಸಾವಿರಾರರು ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡಸಿದರು.
ನಗರದಲ್ಲಿಂದು ದೊಡ್ಡಬಳ್ಳಾಪುರ ವ್ಯಾಪ್ತಿಯ ಪ್ರವಾಸಿ ಮಂದಿರದಿಂದ ತಹಶೀಲ್ದಾರ್ ಕಚೇರಿವರೆಗೂ ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಎಸ್ಪಿ  ರೈತರು, ರಾಜ್ಯ ರ‍್ಕಾರ ಈ ಕೂಡಲೇ ಸಾಗುವಳಿ ಚೀಟಿ ನೀಡಬೇಕೆಂದು ಆಗ್ರಹಿಸಿದರು.ಪ್ರತಿಭಟನಾ ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ಮಾರಸಂದ್ರ ಮುನಿಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಬರುವ ಬಡ ಕುಟುಂಬಗಳು ತಮ್ಮ ಮನೆಗಳಿಗೆ ಹಕ್ಕುಪತ್ರವನ್ನು ಕೊಡುವಂತೆ ೯೪ಸಿ ಮತ್ತು ೯೪ಸಿಸಿ ರ‍್ಜಿ ಹಾಕಿಕೊಂಡಿದ್ದು, ತರ‍್ತಾಗಿ ಇಂತಹ ಕುಟುಂಬಗಳಿಗೆ ಹಕ್ಕುಪತ್ರವನ್ನು ಕೊಡಬೇಕು. ಅಲ್ಲದೆ, ಪರಿಶಿಷ್ಟ ಜಾತಿ,ರ‍್ಗ, ಹಿಂದುಳಿದವರ, ಧರ‍್ಮಿಕ ಅಲ್ಪಸಂಖ್ಯಾತರ ಹಾಗೂ ಮೇಲ್ಜಾತಿ ಬಡ ಕುಟುಂಬಗಳಿಗೆ ಶವ ಸಂಸ್ಕಾರ ಮಾಡಲು ಇಂದಿಗೂ ಸಹ ಅಂದರೆ ಶೇ.೫೦ರಷ್ಟು ಮೇಲ್ಪಟ್ಟು ಸ್ಮಶಾನ ಇರುವುದಿಲ್ಲ. ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!