ಉದಯವಾಹಿನಿ, ದೌಸಾ: ರಾಜಸ್ತಾನದಲ್ಲಿ 70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ದೌಸಾ ಕಲೆಕ್ಟರೇಟ್ ವೃತ್ತದ ಬಳಿ ರೈಲು ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ಇತರ 34 ಮಂದಿ ಗಂಭೀರವಾಗಿಒ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸುಮಾರು ಹನ್ನೆರಡು ಆಂಬುಲೆನ್ಸ್‍ಗಳಲ್ಲಿ ಕೊತ್ವಾಲಿ ಪೊಲೀಸರು ಎಲ್ಲಾ ಗಾಯಾಳುಗಳನ್ನು ದೌಸಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹರಿದ್ವಾರದಿಂದ ಜೈಪುರಕ್ಕೆ ಹೋಗುತ್ತಿದ್ದ ಬಸ್ ಕಲೆಕ್ಟರೇಟ್ ಛೇದಕ ದೌಸಾ ಬಳಿಯ ಮೋರಿಯಿಂದ 30 ಅಡಿ ಕೆಳಗೆ ಪಲ್ಟಿಯಾಗಿದೆ. ಬಸ್‍ನಲ್ಲಿ ಸುಮಾರು 70-80 ಜನರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಮಹಿಳೆಯರು ಹಾಗು ಇಬ್ಬರು ಪುರುಷರು ಸೇರಿದಂತೆ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಮೃತರ ದೇಹಗಳನ್ನು ದೋಸಾ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!