ಉದಯವಾಹಿನಿ ದೇವದುರ್ಗ: ಮುಂಬರುವ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ನ್ಯಾಯವಾದಿ ವಿ.ಎಂ.ಮೇಟಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈಹಿಂದೆ ಗೆದ್ದವರೆಲ್ಲರೂ ನ್ಯಾಯವಾದಿಗಳು. ಹೀಗಾಗಿ ಈಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್ ಅವಕಾಶ ಕಲ್ಪಿಸಬೇಕು. ಕಾಂಗ್ರೆಸ್ ಪಕ್ಷದ ನಿಯಮದಂತೆ ಪ್ರಾಥಮಿಕ ಹಂತದ ಸದಸ್ವತ ಹೊಂದಿದ್ದೇನೆ. ಇಲ್ಲಸಲ್ಲದವರು ವಿನಾಕಾರಣ ಟೀಕೆಗಳು ಮಾಡುತ್ತಿದ್ದಾರೆ. ಅಂತಹವರ ಮಾತಿಗೆ ಕಿವಿಕೊಂಡಿದ್ದೇ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ್ ಖರ್ಗೆ ಅವರು ಸಾರ್ವತ್ರಿಕ ಚುನಾವಣೆ ದೇವದುರ್ಗ ವಿಧಾನಸಭೆ ಕ್ಷೇತ್ರಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ್ದು, ರಾಜಕೀಯ ಕಾಣದ ಕೈಯಿಗಳ ಕುತ್ರಂತ ಹಿನ್ನೆಲೆ ಟಿಕೆಟ್ ತಪ್ಪಿದೆ. ಸುಮಾರ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡಲಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಎಐಸಿಸಿ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜನ್ ಖರ್ಗೆ ಹಾಗೂ ರಾಜ್ಯಾಧ್ಯಕ್ಷ ಡಿಸಿಎಂ ಡಿ.ಕೆ.ಶಿವುಕುಮಾರ ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಈಗಾಗಲೇ ಸಚಿವರಾದ ಎನ್.ಎಸ್.ಬೋಸರಾಜ್, ಡಾ.ಶರಣಪ್ರಕಾಶ ಪಾಟೀಲ್ ಅವರ ಗಮನಕ್ಕೆ ತರಲಾಗಿದೆ. ರಾಯಚೂರು, ಯಾದಗೀರ ಜಿಲ್ಲೆಯ ವ್ಯಾಪ್ತಿ ೮ ಕ್ಷೇತ್ರ ವ್ಯಾಪ್ತಿಯಲ್ಲಿ ಒಟನಾಟ ಇದ್ದು, ಸ್ಪರ್ಧಿಸಲು ಹಲವು ಶಾಸಕರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು. ಹೈಕಮಾಂಡ್ ಮಾರ್ಗದರ್ಶನದಲ್ಲಿ ನಡೆಯುತ್ತೇನೆ. ಒಂದು ವೇಳೆ ಟಿಕೆಟ್ ನೀಡದೇ ಇದ್ದಲ್ಲಿ ಪಕ್ಷದಲ್ಲಿ ಪ್ರಮಾಣಿಕ ಸೇವೆ ನೀಡಲು ಸಂಕಲ್ಪ ಮಾಡಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ಮೈಗೊಂಡಿಸಿಕೊAಡು ಬಂದಿದ್ದೇನೆ. ಸುಮಾರ ವರ್ಷಗಳ ಕಾಲ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಹೀಗಾಗಿ ದುಡಿದವರಿಗೆ ಈಬಾರಿ ಲೋಕಸಭಾ ಚುನಾವಣೆಯ ಆಕಾಂಕ್ಷಿ ಆಗಿದ್ದೇನೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿರುವAತ ಐದು ಗ್ಯಾರಂಟಿ ಯೋಜನೆಗಳು ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ೧೫ರಿಂದ ೨೦ ಸೀಟು ಗೆಲವು ವಿಶ್ವಾಸ ಹೊಂದಿದ್ದೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾಜಿ ತಾಪಂ ಉಪಾಧ್ಯಕ್ಷ ಗೋವಿಂದರಾಜ್, ಸಾಬಣ್ಣ ಹೂಗಾರ ಗಾಣಧಾಳ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!