ಉದಯವಾಹಿನಿ, ಬೆಂಗಳೂರು: ಬಂಟರ ಸಂಘದ ಸಭಾಂಗಣದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆಯಾದ ಕಂಬಳವನ್ನು ’ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಧ್ಯೇಯ ವಾಕ್ಯದೊಡನೆ ಬೆಂಗಳೂರಿನಲ್ಲಿ ನವೆಂಬರ್ ೨೪, ೨೫ ಮತ್ತು ೨೬ ರಂದು ಆಯೋಜಿಸಿಲಾಗಿದೆ.
ಇತಿಹಾಸ ಸೃಷ್ಟಿಸರುವ ಬೆಂಗಳೂರು ಕಂಬಳ’ ಕಾರ್ಯಕ್ರಮದಲ್ಲಿ ಕರಾವಳಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸುವುದರ ಜೊತೆಗೆ ನಮ್ಮದೇ ಹಬ್ಬವನ್ನಾಗಿ ಆಚರಿಸಬೇಕಾಗಿದೆ. ಬೆಂಗಳೂರುನಲ್ಲಿ ನೆಲೆಸಿರುವ ನಮ್ಮೆಲ್ಲಾ ಬಂಧುಗಳು, ಸಂಘಟನೆಗಳು, ಜಾತೀಯ ಸಂಘಟನೆಗಳು, ಸಾಂಸ್ಕೃತಿಕ ಸಂಘಟನೆಗಳು, ಈ ಮಹಾ ಉತ್ಸವದಲ್ಲಿ ಪಾಲ್ಗೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಕೂಡ.
ಈ ನಿಟ್ಟನಲ್ಲಿ ಕಾರ್ಯಕ್ರಮದ ರೂಪುರೇಷೆಯನ್ನು ತಯಾರಿಸಲು, ಆಯೋಜಕರು ಬೆಂಗಳೂರಿನಲ್ಲಿ ನೆಲೆಸಿರುವ ಸರ್ವ ಜಾತೀಯ ಸಂಘಟನೆಗಳ ಪ್ರಮುಖರೊಂದಿಗೆ ಚರ್ಚಿಸಿ, ಎಲ್ಲ ಅತ್ಯಮೂಲ್ಯ ಸಲಹೆಗಳನ್ನು ಪಡೆಯಲು ತೀರ್ಮಾನಿಸಿಲಾಯಿತು.
ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಯವರ ನೇತೃತ್ವದಲ್ಲಿ ಹಾಗೂ ಈ ಸಭೆಯಲ್ಲಿ ಅಧ್ಯಕ್ಷರಾದ ಅಶೋಕ ರೈ ರವರು, ಕಾರ್ಯಾಧ್ಯಕ್ಷರಾದ ಗುರುಕಿರಣ್ ರವರು, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿಯವರು ಮತ್ತು ಸಂಘಟನಾಧ್ಯಕ್ಷರಾದ ಉಮೇಶ್ ಶೆಟ್ಟಿಯವರು ಮತ್ತು ಉಪೇಂದ್ರ ಶೆಟ್ಟಿಯವರು ಹಾಗೂ ಇನ್ನಿತರ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!