
ಉದಯವಾಹಿನಿ ಮುದಗಲ್ಲ: ಪುರಸಭೆ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಾದರೂ ಸಿಬ್ಬಂದಿ ತಮ್ಮ ಕರ್ತವ್ಯಕ್ಕೆ ಹಾಜರಾಗದೆ ಇರುವುದರಿಂದ ಮುದಗಲ್ಲ ಜನ ಸಾಮಾನ್ಯರು, ಅತೀವ ತೊಂದರೆ ಯಾಗುತ್ತಿದೆ.
ಸಮಯಕ್ಕೆ ಸರಿಯಾಗಿ ಬಾರದ ಹಾಗೂ ಕರ್ತವ್ಯ ಲೋಪ ಎಸಗುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿ ತಡವಾಗಿ ಕರ್ತವ್ಯಕ್ಕೆ ಹಾಜರಾಗುವ ರೂಢಿ ಬೆಳೆಸಿಕೊಳ್ಳುತ್ತಿರುವ ಇಂತಹ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ನಿಷ್ಕಾಳಜಿ ವಹಿಸುತ್ತಿರುವ ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಸ್. ಡಿ .ಪಿ .ಐ .ನ ರಾಯಚೂರು ಗ್ರಾಮಾಂತರ ಜಿಲ್ಲಾಧ್ಯಕ್ಷರು ಎಂ ಡಿ ರಫಿ ಖಾಜಿ ಹಾಗು ಪ್ರಧಾನ ಕಾರ್ಯದರ್ಶಿ ಪಾಶ ಕಡ್ಡಿಪುಡಿ ಆಗ್ರಹಿಸಿದರು.
