ಉದಯವಾಹಿನಿ, ಬೆಂಗಳೂರು: ಡಿ.ಕೆ. ಶಿವಕುಮಾರ್ ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೊಡುವುದಾದರೆ ಕೊಡಲಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೇ ಜೆಡಿಎಸ್ ಶಾಸಕರು ಬೆಂಬಲ ನೀಡಲಿದ್ದಾರೆ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಬೆಂಬಲ ಕೊಡಲಿ ಅದು ಒಳ್ಳೆಯದೇ ಅಲ್ಲವಾ ಎಂದು ವ್ಯಂಗ್ಯದ ದಾಟಿಯಲ್ಲಿ ಹೇಳಿದರು.
ಕುಮಾರಸ್ವಾಮಿ ಅವರು ಈಗ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಅಲ್ಲಿಂದಲೇ ನಮಗೆ ಬೆಂಬಲ ಕೊಡುತ್ತಾರೆ ಎಂದರೆ ಒಳ್ಳೆಯದು. ಬೆಂಬಲ ಕೊಡಲಿ ಎಂದು ಲೇವಡಿ ಮಾಡಿದರು.
ಇನ್ನು ಮುಂದೆ ಸಿಎಂ ವಿಚಾರವಾಗಿ ಯಾರೂ ನನ್ನನ್ನು ಪ್ರಶ್ನೆ ಕೇಳಬೇಡಿ ಎಂದು ಮಾಧ್ಯಮದವರಿಗೆ ವಿನಂತಿ ಮಾಡಿದ ಡಾ. ಜಿ. ಪರಮೇಶ್ವರ್, ಸಿಎಂ ವಿಚಾರವಾಗಿ ನಾನು ಇನ್ನು ಪ್ರತಿಕ್ರಿಯೆ ಕೊಡಲ್ಲ ಎಂದರು
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಮಾಡುವುದನ್ನು ಬಿಟ್ಟು ಕೇಂದ್ರ ಸರ್ಕಾರದ ಜತೆ ಮಾತನಾಡಿ ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ ಎಂದು ಅವರು ಹೇಳಿದರು.
